← Nehemiah (3/13) → |
1. | ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು. |
2. | ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು. |
3. | ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು. |
4. | ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು. |
5. | ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ. |
6. | ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು. |
7. | ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು. |
8. | ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು. |
9. | ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು. |
10. | ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು. |
11. | ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು. |
12. | ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು. |
13. | ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು. |
14. | ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು. |
15. | ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು. |
16. | ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು. |
17. | ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು. |
18. | ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು. |
19. | ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು. |
20. | ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು. |
21. | ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು. |
22. | ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು. |
23. | ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು. |
24. | ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು. |
25. | ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು. |
26. | ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು. |
27. | ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು. |
28. | ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು. |
29. | ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು. |
30. | ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು. |
31. | ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು. |
32. | ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು. |
← Nehemiah (3/13) → |