Numbers (1/36) → |
1. | ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ-- |
2. | ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ. |
3. | ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ. |
4. | ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ. |
5. | ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್, |
6. | ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್, |
7. | ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್, |
8. | ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್, |
9. | ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್, |
10. | ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್, |
11. | ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್, |
12. | ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್, |
13. | ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್, |
14. | ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್. |
15. | ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು, |
16. | ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ. |
17. | ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು. |
18. | ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು. |
19. | ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು. |
20. | ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು |
21. | ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು. |
22. | ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು |
23. | ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು. |
24. | ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು |
25. | ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು. |
26. | ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು |
27. | ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು. |
28. | ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು |
29. | ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು. |
30. | ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು |
31. | ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು. |
32. | ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು |
33. | ಎಫ್ರಾಯಾಮ್ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು. |
34. | ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ |
35. | ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು. |
36. | ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು |
37. | ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು. |
38. | ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು |
39. | ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು. |
40. | ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು |
41. | ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು. |
42. | ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು |
43. | ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು. |
44. | ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು. |
45. | ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ |
46. | ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು. |
47. | ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ. |
48. | ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ-- |
49. | ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ. |
50. | ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು. |
51. | ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. |
52. | ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು. |
53. | ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು. |
54. | ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು. |
Numbers (1/36) → |