← Numbers (16/36) → |
1. | ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು |
2. | ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು. |
3. | ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು. |
4. | ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು |
5. | ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ: |
6. | ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು |
7. | ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು. |
8. | ಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ. |
9. | ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ? |
10. | ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ? |
11. | ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು. |
12. | ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ, |
13. | ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ? |
14. | ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು. |
15. | ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು. |
16. | ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು |
17. | ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು. |
18. | ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು. |
19. | ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು. |
20. | ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ-- |
21. | ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು. |
22. | ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು. |
23. | ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- |
24. | ಕೋರಹ ದಾತಾನ್ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು-- |
25. | ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು. |
26. | ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು. |
27. | ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು. |
28. | ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ. |
29. | ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ. |
30. | ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. |
31. | ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ |
32. | ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. |
33. | ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. |
34. | ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು. |
35. | ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. |
36. | ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ |
37. | ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು. |
38. | ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು. |
39. | ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು. |
40. | ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು. |
41. | ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು. |
42. | ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು. |
43. | ಮೋಶೆ ಆರೋನರೂ ಸಭೆಯ ಗುಡಾರದ ಮುಂದೆ ಬಂದರು. |
44. | ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- |
45. | ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು. |
46. | ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. |
47. | ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು. |
48. | ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು. |
49. | ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು. |
50. | ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು. |
← Numbers (16/36) → |