← Numbers (18/36) → |
1. | ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು. |
2. | ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು; |
3. | ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು. |
4. | ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. |
5. | ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು. |
6. | ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ. |
7. | ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು. |
8. | ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ. |
9. | ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು. |
10. | ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು. |
11. | ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು. |
12. | ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ. |
13. | ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು. |
14. | ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು. |
15. | ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. |
16. | ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು. |
17. | ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು. |
18. | ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು. |
19. | ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು. |
20. | ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ. |
21. | ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ. |
22. | ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು. |
23. | ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. |
24. | ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು. |
25. | ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- |
26. | ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. |
27. | ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು. |
28. | ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು. |
29. | ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. |
30. | ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು. |
31. | ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ. |
32. | ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು. |
← Numbers (18/36) → |