← Numbers (2/36) → |
1. | ಕರ್ತನು ಮಾತನಾಡಿ ಮೋಶೆಗೂ ಆರೋನನಿಗೂ ಹೇಳಿದ್ದೇನಂದರೆ-- |
2. | ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು. |
3. | ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. |
4. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು. |
5. | ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. |
6. | ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು. |
7. | ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ. |
8. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು. |
9. | ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು. |
10. | ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ; |
11. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು. |
12. | ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; |
13. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು. |
14. | ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; |
15. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು. |
16. | ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು. |
17. | ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು. |
18. | ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. |
19. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು. |
20. | ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ. |
21. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು. |
22. | ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ. |
23. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು. |
24. | ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು. |
25. | ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ. |
26. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು. |
27. | ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ; |
28. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು. |
29. | ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ. |
30. | ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು. |
31. | ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು. |
32. | ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ. |
33. | ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ. |
34. | ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು. |
← Numbers (2/36) → |