← Numbers (24/36) → |
1. | ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು. |
2. | ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು. |
3. | ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು. |
4. | ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು-- |
5. | ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ! |
6. | ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ. |
7. | ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು. |
8. | ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು. |
9. | ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು. |
10. | ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ. |
11. | ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು. |
12. | ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ-- |
13. | ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ; |
14. | ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು. |
15. | ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು. |
16. | ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು-- |
17. | ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. |
18. | ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು, |
19. | ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು. |
20. | ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು. |
21. | ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ. |
22. | ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು. |
23. | ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು? |
24. | ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು. |
25. | ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು. |
← Numbers (24/36) → |