← Numbers (27/36) → |
1. | ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ |
2. | ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು-- |
3. | ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ. |
4. | ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು. |
5. | ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು. |
6. | ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ-- |
7. | ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು. |
8. | ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು. |
9. | ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. |
10. | ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ. |
11. | ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು. |
12. | ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು. |
13. | ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ. |
14. | ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು. |
15. | ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ. |
16. | ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ; |
17. | ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು. |
18. | ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು |
19. | ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು. |
20. | ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು. |
21. | ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು. |
22. | ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ |
23. | ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು. |
← Numbers (27/36) → |