← Numbers (28/36) → |
1. | ಕರ್ತನು ಮೋಶೆಯ ಸಂಗಡ ಮಾತ ನಾಡಿ-- |
2. | ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. |
3. | ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. |
4. | ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. |
5. | ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. |
6. | ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. |
7. | ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; |
8. | ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. |
9. | ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ |
10. | ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. |
11. | ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ |
12. | ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. |
13. | ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. |
14. | ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. |
15. | ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. |
16. | ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. |
17. | ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. |
18. | ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. |
19. | ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. |
20. | ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. |
21. | ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. |
22. | ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. |
23. | ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. |
24. | ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. |
25. | ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. |
26. | ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. |
27. | ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ |
28. | ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ |
29. | ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ |
30. | ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು. |
31. | ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು. |
← Numbers (28/36) → |