← Numbers (3/36) → |
1. | ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ: |
2. | ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು. |
3. | ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು. |
4. | ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು. |
5. | ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- |
6. | ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ. |
7. | ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ. |
8. | ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು. |
9. | ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ. |
10. | ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು. |
11. | ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- |
12. | ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು. |
13. | ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು. |
14. | ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- |
15. | ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು. |
16. | ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು. |
17. | ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ. |
18. | ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ. |
19. | ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ. |
20. | ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ. |
21. | ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ. |
22. | ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ. |
23. | ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು. |
24. | ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು. |
25. | ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ |
26. | ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ. |
27. | ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು. |
28. | ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು. |
29. | ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು. |
30. | ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು. |
31. | ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ. |
32. | ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ. |
33. | ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು. |
34. | ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು. |
35. | ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು. |
36. | ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ |
37. | ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ. |
38. | ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. |
39. | ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ. |
40. | ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ. |
41. | ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು. |
42. | ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು. |
43. | ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು. |
44. | ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ-- |
45. | ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು. |
46. | ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ |
47. | ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು. |
48. | ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು. |
49. | ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು. |
50. | ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು. |
51. | ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು. |
← Numbers (3/36) → |