← Numbers (32/36) → |
1. | ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು. |
2. | ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ-- |
3. | ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ |
4. | ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು. |
5. | ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು. |
6. | ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ? |
7. | ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ? |
8. | ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು. |
9. | ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು. |
10. | ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ-- |
11. | ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ |
12. | ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ. |
13. | ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು. |
14. | ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ. |
15. | ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು. |
16. | ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು. |
17. | ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು. |
18. | ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ. |
19. | ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು. |
20. | ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ |
21. | ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ |
22. | ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು. |
23. | ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ. |
24. | ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು. |
25. | ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. |
26. | ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. |
27. | ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು. |
28. | ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು. |
29. | ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. |
30. | ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು. |
31. | ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು. |
32. | ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು. |
33. | ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. |
34. | ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, |
35. | ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, |
36. | ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. |
37. | ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, |
38. | ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. |
39. | ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. |
40. | ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. |
41. | ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು. |
42. | ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. |
← Numbers (32/36) → |