← Numbers (33/36) → |
1. | ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ. |
2. | ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು. |
3. | ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು. |
4. | ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು. |
5. | ಇಸ್ರಾಯೇಲ್ ಮಕ್ಕಳು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು. |
6. | ಸುಕ್ಕೋತಿನಿಂದ ಹೊರಟು ಅರಣ್ಯದ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದು ಕೊಂಡರು. |
7. | ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು. |
8. | ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು. |
9. | ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು. |
10. | ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದು ಕೊಂಡರು. |
11. | ಕೆಂಪುಸಮುದ್ರದಿಂದ ಹೊರಟು ಸೀನೆಂಬ ಅರಣ್ಯದಲ್ಲಿ ಇಳಿದುಕೊಂಡು, |
12. | ಸೀನೆಂಬ ಅರಣ್ಯದಿಂದ ಹೊರಟು ದೊಪ್ಕದಲ್ಲಿ ಇಳಿದು ಕೊಂಡರು. |
13. | ದೊಪ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು. |
14. | ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವದಕ್ಕೆ ನೀರು ಇದ್ದಿಲ್ಲ; |
15. | ರೆಫೀ ದೀಮಿನಿಂದ ಹೊರಟು ಸೀನಾಯಿ ಅರಣ್ಯದಲ್ಲಿ ಇಳಿದುಕೊಂಡರು. |
16. | ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್ಹತಾವದಲ್ಲಿ ಇಳಿದುಕೊಂಡರು. |
17. | ಕಿಬ್ರೋತ್ಹತಾವದಿಂದ ಹೊರಟು ಹಚೇರೋತಿ ನಲ್ಲಿ ಇಳಿದುಕೊಂಡರು. |
18. | ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು. |
19. | ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚನಲ್ಲಿ ಇಳಿದುಕೊಂಡರು. |
20. | ರಿಮ್ಮೋನ್ ಪೆರೆಚನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು. |
21. | ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು. |
22. | ರಿಸ್ಸದಿಂದ ಹೊರಟು ಕೆಹೇಲಾತಿ ನಲ್ಲಿ ಇಳಿದುಕೊಂಡರು. |
23. | ಕೆಹೇಲಾತಿನಿಂದ ಹೊರಟು ಶೆಫೆರ್ ಪರ್ವತದಲ್ಲಿ ಇಳಿದುಕೊಂಡರು. |
24. | ಶೆಫೆರ್ ಪರ್ವತದಿಂದ ಹೊರಟು ಹರಾದದಲ್ಲಿ ಇಳಿದು ಕೊಂಡರು. |
25. | ಹರಾದದಿಂದ ಹೊರಟು ಮಖೇ ಲೋತಿನಲ್ಲಿ ಇಳಿದುಕೊಂಡರು. |
26. | ಮಖೇಲೋತಿ ನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು. |
27. | ತಹತಿನಿಂದ ಹೊರಟು ತೆರಹದಲ್ಲಿ ಇಳಿದು ಕೊಂಡರು. |
28. | ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು. |
29. | ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು. |
30. | ಹಷ್ಮೋನ ದಿಂದ ಹೊರಟು ಮೋಸೇರೋತಿನಲ್ಲಿ ಇಳಿದು ಕೊಂಡರು. |
31. | ಮೋಸೇರೋತಿನಿಂದ ಹೊರಟು ಬೆನೇ ಯಾಕಾನಿನಲ್ಲಿ ಇಳಿದುಕೊಂಡರು. |
32. | ಬೆನೇಯಾ ಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದು ಕೊಂಡರು. |
33. | ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು. |
34. | ಯೊಟ್ಬಾತ ದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು. |
35. | ಅಬ್ರೋನದಿಂದ ಹೊರಟು ಎಚ್ಯೋನ್ಗೆಬೆರಿನಲ್ಲಿ ಇಳಿದುಕೊಂಡರು. |
36. | ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು. |
37. | ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು. |
38. | ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು. |
39. | ಆರೋನನು ಹೋರ್ ಗುಡ್ಡ ದಲ್ಲಿ ಸಾಯುವಾಗ ಅವನು ನೂರ ಇಪ್ಪತ್ತು ಮೂರು ವರುಷದವನಾಗಿದ್ದನು. |
40. | ಆಗ ಇಸ್ರಾಯೇಲ್ ಮಕ್ಕಳು ಬರುವದನ್ನು ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು. |
41. | ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು. |
42. | ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. |
43. | ಪೂನೋನಿ ನಿಂದ ಹೊರಟು ಒಬೋತಿನಲ್ಲಿ ಇಳಿದುಕೊಂಡರು. |
44. | ಒಬೋತಿನಿಂದ ಹೊರಟು ಮೋವಾಬಿನ ಮೇರೆ ಯಲ್ಲಿರುವ ಇಯ್ಯಾಮಿನಲ್ಲಿ ಇಳಿದುಕೊಂಡರು. |
45. | ಇಯ್ಯಾಮಿನಿಂದ ಹೊರಟು ದೀಬೋನ್ಗಾದಿನಲ್ಲಿ ಇಳಿದುಕೊಂಡರು. |
46. | ದೀಬೋನ್ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು. |
47. | ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್ ಗುಡ್ಡಗಳಲ್ಲಿ ಇಳಿದುಕೊಂಡರು. |
48. | ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು. |
49. | ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು. |
50. | ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ-- |
51. | ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್ ದೇಶಕ್ಕೆ ಬರುವಾಗ |
52. | ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು. |
53. | ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. |
54. | ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು. |
55. | ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು. |
56. | ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು. |
← Numbers (33/36) → |