Obadiah (1/1) |
1. | ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ! |
2. | ಇಗೋ, ನಿನ್ನನ್ನು ಅನ್ಯಜನಾಂಗಗಳಲ್ಲಿ ಹೀನವಾಗಿ ಮಾಡಿದ್ದೇನೆ. |
3. | ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. |
4. | ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ. |
5. | ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ? |
6. | ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ. |
7. | ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ. |
8. | ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ? |
9. | ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು. |
10. | ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ. |
11. | ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. |
12. | ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; |
13. | ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; |
14. | ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು. |
15. | ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು. |
16. | ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು. |
17. | ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು. |
18. | ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ. |
19. | ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು. |
20. | ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು. |
21. | ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು. |
Obadiah (1/1) |