← Proverbs (11/31) → |
1. | ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು. |
2. | ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ. |
3. | ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು. |
4. | ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ. |
5. | ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು. |
6. | ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು. |
7. | ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು. |
8. | ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ. |
9. | ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು. |
10. | ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ. |
11. | ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ. |
12. | ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ. |
13. | ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ. |
14. | ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ. |
15. | ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು. |
16. | ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ. |
17. | ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ. |
18. | ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು. |
19. | ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ. |
20. | ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ. |
21. | ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು. |
22. | ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು. |
23. | ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ. |
24. | ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. |
25. | ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು. |
26. | ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು. |
27. | ಒಳ್ಳೇದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದು ತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವದು. |
28. | ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು. |
29. | ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು. |
30. | ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ. |
31. | ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ. |
← Proverbs (11/31) → |