← Proverbs (12/31) → |
1. | ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು. |
2. | ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ. |
3. | ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ. |
4. | ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು. |
5. | ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ. |
6. | ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು. |
7. | ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು. |
8. | ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು. |
9. | ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು. |
10. | ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ. |
11. | ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು. |
12. | ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ. |
13. | ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು. |
14. | ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು. |
15. | ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ. |
16. | ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ. |
17. | ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ. |
18. | ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ. |
19. | ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ. |
20. | ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ. |
21. | ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು. |
22. | ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ. |
23. | ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ. |
24. | ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು. |
25. | ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು. |
26. | ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ. |
27. | ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ. |
28. | ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ. |
← Proverbs (12/31) → |