← Proverbs (14/31) → |
1. | ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ. |
2. | ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ. |
3. | ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು. |
4. | ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ. |
5. | ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ. |
6. | ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ. |
7. | ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು. |
8. | ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ. |
9. | ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ. |
10. | ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ. |
11. | ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು. |
12. | ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ. |
13. | ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ. |
14. | ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು. |
15. | ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು. |
16. | ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ. |
17. | ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ. |
18. | ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ. |
19. | ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ. |
20. | ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು. |
21. | ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು. |
22. | ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು. |
23. | ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ. |
24. | ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ. |
25. | ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ. |
26. | ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು. |
27. | ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ. |
28. | ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ. |
29. | ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು. |
30. | ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು. |
31. | ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ. |
32. | ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ. |
33. | ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ. |
34. | ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ. |
35. | ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ. |
← Proverbs (14/31) → |