← Proverbs (15/31) → |
1. | ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ. |
2. | ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ. |
3. | ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ. |
4. | ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು. |
5. | ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು; |
6. | ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು. |
7. | ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ. |
8. | ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು. |
9. | ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ. |
10. | ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು. |
11. | ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ. |
12. | ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ. |
13. | ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ. |
14. | ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ. |
15. | ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ. |
16. | ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ. |
17. | ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ. |
18. | ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ. |
19. | ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ. |
20. | ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ. |
21. | ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ. |
22. | ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ. |
23. | ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು! |
24. | ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ. |
25. | ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು. |
26. | ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ. |
27. | ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು. |
28. | ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ. |
29. | ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ. |
30. | ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ. |
31. | ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ. |
32. | ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ. |
33. | ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ. |
← Proverbs (15/31) → |