← Proverbs (16/31) → |
1. | ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು. |
2. | ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ. |
3. | ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು. |
4. | ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ. |
5. | ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ. |
6. | ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ. |
7. | ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ. |
8. | ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ. |
9. | ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ. |
10. | ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ. |
11. | ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ. |
12. | ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ. |
13. | ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ. |
14. | ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು. |
15. | ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ. |
16. | ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ. |
17. | ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ. |
18. | ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು. |
19. | ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ. |
20. | ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು. |
21. | ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ. |
22. | ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ. |
23. | ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ. |
24. | ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ. |
25. | ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ. |
26. | ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ. |
27. | ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ. |
28. | ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ. |
29. | ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ. |
30. | ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ. |
31. | ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ. |
32. | ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು. |
33. | ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ. |
← Proverbs (16/31) → |