← Proverbs (17/31) → |
1. | ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು. |
2. | ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು. |
3. | ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ. |
4. | ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು; |
5. | ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು. |
6. | ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ. |
7. | ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ. |
8. | ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ. |
9. | ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ. |
10. | ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ. |
11. | ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು. |
12. | ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು. |
13. | ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ. |
14. | ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು. |
15. | ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು. |
16. | ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ? |
17. | ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ. |
18. | ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ. |
19. | ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ. |
20. | ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು. |
21. | ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ. |
22. | ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ. |
23. | ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ. |
24. | ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು. |
25. | ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ. |
26. | ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ. |
27. | ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ. |
28. | ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು. |
← Proverbs (17/31) → |