← Proverbs (18/31) → |
1. | ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ. |
2. | ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ. |
3. | ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ. |
4. | ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ. |
5. | ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ. |
6. | ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. |
7. | ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ. |
8. | ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು. |
9. | ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ. |
10. | ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ. |
11. | ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ. |
12. | ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ. |
13. | ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ. |
14. | ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು? |
15. | ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ. |
16. | ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ. |
17. | ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ. |
18. | ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ; |
19. | ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ. |
20. | ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು. |
21. | ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು. |
22. | ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ. |
23. | ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ. |
24. | ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ. |
← Proverbs (18/31) → |