← Proverbs (2/31) → |
1. | ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ |
2. | ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ |
3. | ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ |
4. | ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, |
5. | ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. |
6. | ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ. |
7. | ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ. |
8. | ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ. |
9. | ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ. |
10. | ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು. |
11. | ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು; |
12. | ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ |
13. | ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ |
14. | ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು. |
15. | ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ. |
16. | ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು |
17. | ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು. |
18. | ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ. |
19. | ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ. |
20. | ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು. |
21. | ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು. |
22. | ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು. |
← Proverbs (2/31) → |