← Proverbs (23/31) → |
1. | ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು; |
2. | ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ. |
3. | ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು. |
4. | ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು. |
5. | ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ. |
6. | ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ; |
7. | ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ. |
8. | ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ. |
9. | ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು. |
10. | ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು; |
11. | ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು. |
12. | ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು. |
13. | ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ. |
14. | ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ; |
15. | ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು. |
16. | ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು. |
17. | ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು. |
18. | ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು. |
19. | ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು. |
20. | ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ. |
21. | ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು. |
22. | ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ. |
23. | ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ. |
24. | ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು. |
25. | ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು. |
26. | ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ. |
27. | ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ. |
28. | ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ. |
29. | ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು? |
30. | ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ. |
31. | ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ. |
32. | ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ. |
33. | ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು. |
34. | ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ. |
35. | ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ. |
← Proverbs (23/31) → |