← Proverbs (24/31) → |
1. | ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ; |
2. | ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ. |
3. | ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ; |
4. | ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು. |
5. | ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ. |
6. | ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ. |
7. | ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ. |
8. | ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು. |
9. | ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ. |
10. | ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ. |
11. | ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ |
12. | ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ? |
13. | ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು; |
14. | ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ. |
15. | ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ; |
16. | ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು. |
17. | ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ; |
18. | ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು. |
19. | ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ; |
20. | ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು. |
21. | ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ. |
22. | ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು? |
23. | ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ. |
24. | ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು. |
25. | ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು. |
26. | ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು. |
27. | ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ. |
28. | ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ. |
29. | ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ. |
30. | ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು; |
31. | ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು. |
32. | ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು. |
33. | ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು; |
34. | ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು. |
← Proverbs (24/31) → |