← Proverbs (25/31) → |
1. | ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ. |
2. | ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು. |
3. | ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ. |
4. | ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು. |
5. | ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು. |
6. | ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ; |
7. | ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು. |
8. | ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ. |
9. | ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ; |
10. | ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು. |
11. | ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. |
12. | ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ. |
13. | ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ. |
14. | ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ. |
15. | ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ. |
16. | ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು. |
17. | ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು. |
18. | ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ. |
19. | ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು. |
20. | ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು. |
21. | ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು. |
22. | ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು. |
23. | ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ. |
24. | ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು. |
25. | ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ. |
26. | ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ. |
27. | ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ. |
28. | ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ. |
← Proverbs (25/31) → |