← Proverbs (27/31) → |
1. | ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು. |
2. | ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ. |
3. | ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ. |
4. | ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು? |
5. | ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು. |
6. | ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ. |
7. | ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ. |
8. | ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ. |
9. | ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ. |
10. | ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು. |
11. | ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು. |
12. | ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ. |
13. | ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ. |
14. | ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು. |
15. | ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ. |
16. | ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ. |
17. | ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ. |
18. | ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು. |
19. | ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ. |
20. | ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ. |
21. | ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ. |
22. | ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ. |
23. | ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ. |
24. | ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ? |
25. | ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ. |
26. | ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ. |
27. | ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ. |
← Proverbs (27/31) → |