← Proverbs (5/31) → |
1. | ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ |
2. | ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು. |
3. | ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ. |
4. | ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ. |
5. | ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ. |
6. | ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ. |
7. | ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ. |
8. | ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು. |
9. | ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. |
10. | ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. |
11. | ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- |
12. | ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. |
13. | ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು. |
14. | ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ. |
15. | ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. |
16. | ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. |
17. | ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. |
18. | ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. |
19. | ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು. |
20. | ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ? |
21. | ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ. |
22. | ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು. |
23. | ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು. |
← Proverbs (5/31) → |