← Proverbs (7/31) → |
1. | ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ. |
2. | ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು. |
3. | ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ. |
4. | ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು; |
5. | ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು. |
6. | ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ |
7. | ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು. |
8. | ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ |
9. | ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು. |
10. | ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು. |
11. | (ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ. |
12. | ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು). |
13. | ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು |
14. | ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ. |
15. | ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ. |
16. | ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ. |
17. | ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ. |
18. | ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ. |
19. | ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ. |
20. | ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು |
21. | ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. |
22. | ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ |
23. | ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. |
24. | ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ. |
25. | ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ. |
26. | ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ. |
27. | ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ. |
← Proverbs (7/31) → |