← Proverbs (9/31) → |
1. | ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ. |
2. | ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. |
3. | ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ-- |
4. | ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು-- |
5. | ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ |
6. | ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ. |
7. | ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. |
8. | ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. |
9. | ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು. |
10. | ಪರಿಶುದ್ಧರ ತಿಳುವಳಿಕೆಯೇ ವಿವೇಕವು. |
11. | ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು. |
12. | ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ. |
13. | ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು. |
14. | ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ. |
15. | ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ. |
16. | ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು-- |
17. | ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ. |
18. | ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು. |
← Proverbs (9/31) → |