← Psalms (100/150) → |
1. | ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ, |
2. | ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ. |
3. | ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ. |
4. | ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ. |
5. | ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. |
← Psalms (100/150) → |