← Psalms (104/150) → |
1. | ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ. |
2. | ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ. |
3. | ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ. |
4. | ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ. |
5. | ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು. |
6. | ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು. |
7. | ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು. |
8. | ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. |
9. | ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ. |
10. | ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ; |
11. | ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ. |
12. | ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ. |
13. | ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ. |
14. | ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ. |
15. | ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ. |
16. | ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ. |
17. | ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ. |
18. | ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ. |
19. | ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ. |
20. | ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ. |
21. | ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ. |
22. | ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ. |
23. | ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ. |
24. | ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ. |
25. | ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ. |
26. | ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ. |
27. | ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ. |
28. | ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ. |
29. | ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ. |
30. | ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ. |
31. | ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ. |
32. | ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ. |
33. | ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು. |
34. | ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು. |
35. | ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ. |
← Psalms (104/150) → |