← Psalms (106/150) → |
1. | ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು. |
2. | ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು? |
3. | ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು. |
4. | ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು. |
5. | ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು. |
6. | ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ. |
7. | ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು. |
8. | ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು. |
9. | ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು. |
10. | ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು. |
11. | ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ. |
12. | ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು. |
13. | ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು. |
14. | ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು. |
15. | ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು. |
16. | ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು. |
17. | ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು. |
18. | ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು. |
19. | ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು. |
20. | ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು. |
21. | ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ |
22. | ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು. |
23. | ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು. |
24. | ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು. |
25. | ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು. |
26. | ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ |
27. | ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು. |
28. | ಬಾಳ್‌ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು |
29. | ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು. |
30. | ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. |
31. | ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು. |
32. | ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು. |
33. | ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು. |
34. | ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು. |
35. | ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. |
36. | ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು. |
37. | ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. |
38. | ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು. |
39. | ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು. |
40. | ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು |
41. | ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು. |
42. | ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು. |
43. | ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. |
44. | ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು |
45. | ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು. |
46. | ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು. |
47. | ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು. |
48. | ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ. |
← Psalms (106/150) → |