← Psalms (107/150) → |
1. | ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು. |
2. | ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ, |
3. | ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ. |
4. | ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ, |
5. | ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು. |
6. | ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ, |
7. | ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು. |
8. | ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ. |
9. | ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ. |
10. | ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು |
11. | ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ |
12. | ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು. |
13. | ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ |
14. | ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು. |
15. | ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ. |
16. | ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ. |
17. | ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ. |
18. | ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ. |
19. | ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ. |
20. | ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು. |
21. | ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. |
22. | ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ. |
23. | ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು |
24. | ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. |
25. | ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ. |
26. | ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ. |
27. | ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು. |
28. | ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ |
29. | ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು. |
30. | ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ. |
31. | ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ. |
32. | ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ. |
33. | ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ |
34. | ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ. |
35. | ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ. |
36. | ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ, |
37. | ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು. |
38. | ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ. |
39. | ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ. |
40. | ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ. |
41. | ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ. |
42. | ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು. |
43. | ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು. |
← Psalms (107/150) → |