← Psalms (109/150) → |
1. | ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ. |
2. | ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ. |
3. | ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ. |
4. | ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ. |
5. | ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ. |
6. | ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. |
7. | ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ. |
8. | ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ. |
9. | ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. |
10. | ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. |
11. | ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. |
12. | ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. |
13. | ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. |
14. | ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. |
15. | ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ. |
16. | ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು. |
17. | ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. |
18. | ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. |
19. | ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. |
20. | ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ. |
21. | ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು. |
22. | ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ. |
23. | ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ; |
24. | ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು. |
25. | ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ. |
26. | ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು. |
27. | ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ. |
28. | ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ. |
29. | ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ. |
30. | ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು. |
31. | ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು. |
← Psalms (109/150) → |