← Psalms (111/150) → |
1. | ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು. |
2. | ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ. |
3. | ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ. |
4. | ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ. |
5. | ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು. |
6. | ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ. |
7. | ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು. |
8. | ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ. |
9. | ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ. |
10. | ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ. |
← Psalms (111/150) → |