← Psalms (113/150) → |
1. | ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ; |
2. | ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ. |
3. | ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು. |
4. | ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ. |
5. | ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ. |
6. | ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ. |
7. | ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, |
8. | ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ. |
9. | ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ. |
← Psalms (113/150) → |