← Psalms (114/150) → |
1. | ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ |
2. | ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು. |
3. | ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು. |
4. | ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. |
5. | ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? |
6. | ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? |
7. | ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವ |
8. | ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು. |
← Psalms (114/150) → |