← Psalms (116/150) → |
1. | ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. |
2. | ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು. |
3. | ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. |
4. | ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು. |
5. | ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು. |
6. | ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು. |
7. | ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ. |
8. | ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ. |
9. | ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು. |
10. | ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು. |
11. | ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು. |
12. | ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ? |
13. | ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು. |
14. | ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು. |
15. | ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ. |
16. | ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ. |
17. | ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು. |
18. | ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ, |
19. | ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ. |
← Psalms (116/150) → |