← Psalms (118/150) → |
1. | ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ. |
2. | ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ. |
3. | ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ. |
4. | ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ. |
5. | ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು. |
6. | ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು? |
7. | ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು. |
8. | ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. |
9. | ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು. |
10. | ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. |
11. | ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. |
12. | ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು. |
13. | ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು. |
14. | ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು. |
15. | ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. |
16. | ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. |
17. | ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು. |
18. | ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. |
19. | ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು. |
20. | ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು. |
21. | ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ. |
22. | ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. |
23. | ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ. |
24. | ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು. |
25. | ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ. |
26. | ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು. |
27. | ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ, |
28. | ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು. |
29. | ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ. |
← Psalms (118/150) → |