← Psalms (119/150) → |
1. | ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು. |
2. | ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು. |
3. | ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ. |
4. | ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ. |
5. | ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ. |
6. | ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು. |
7. | ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು. |
8. | ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ. |
9. | ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ. |
10. | ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು. |
11. | ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ. |
12. | ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು. |
13. | ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ. |
14. | ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ. |
15. | ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು. |
16. | ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು. |
17. | ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು. |
18. | ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು. |
19. | ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ. |
20. | ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ |
21. | ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ. |
22. | ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು. |
23. | ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು. |
24. | ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ. |
25. | ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು. |
26. | ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು. |
27. | ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು. |
28. | ನನ್ನ ಪ್ರಾಣವು ಭಾರದಿಂದ ಕರಗಿಹೋಗುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಸ್ಥಿರಮಾಡು; |
29. | ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು. |
30. | ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ; |
31. | ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ. |
32. | ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ. |
33. | ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು. |
34. | ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು. |
35. | ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ. |
36. | ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು. |
37. | ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು. |
38. | ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು, |
39. | ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು; |
40. | ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು. |
41. | ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ. |
42. | ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ. |
43. | ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ, |
44. | ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು. |
45. | ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ. |
46. | ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ. |
47. | ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು. |
48. | ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು. |
49. | ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ, |
50. | ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು. |
51. | ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ. |
52. | ಓ ಕರ್ತನೇ, ಪೂರ್ವಕಾಲದಿಂದ ಬಂದಿ ರುವ ನಿನ್ನ ನ್ಯಾಯಗಳನ್ನು ಜ್ಞಾಪಕಮಾಡಿಕೊಂಡು ಆದರಣೆ ಹೊಂದಿದ್ದೇನೆ. |
53. | ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು. |
54. | ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಯಮಗಳು ನನಗೆ ಕೀರ್ತನೆಗಳಾಗಿವೆ. |
55. | ಓ ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ. |
56. | ನಿನ್ನ ಕಟ್ಟಳೆಗಳನ್ನು ಕೈಕೊಳ್ಳಲು ನನಗೆ ಅನುಗ್ರಹವಾಯಿತು. |
57. | ಕರ್ತನೇ ನನ್ನ ಪಾಲು; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ಹೇಳಿದೆನು. |
58. | ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು. |
59. | ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ. |
60. | ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ. |
61. | ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ. |
62. | ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ. |
63. | ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ. |
64. | ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು. |
65. | ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ. |
66. | ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ. |
67. | ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ. |
68. | ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು. |
69. | ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು. |
70. | ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ. |
71. | ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು. |
72. | ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು. |
73. | ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು. |
74. | ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ. |
75. | ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು. |
76. | ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ. |
77. | ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ. |
78. | ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು. |
79. | ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ. |
80. | ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ. |
81. | ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. |
82. | ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ. |
83. | ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ. |
84. | ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ? |
85. | ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ. |
86. | ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು. |
87. | ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ. |
88. | ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು. |
89. | ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ. |
90. | ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ. |
91. | ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ. |
92. | ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು. |
93. | ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ. |
94. | ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ. |
95. | ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ. |
96. | ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ. |
97. | ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು. |
98. | ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. |
99. | ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. |
100. | ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ. |
101. | ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ. |
102. | ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ. |
103. | ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ. |
104. | ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ. |
105. | ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ. |
106. | ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು. |
107. | ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು. |
108. | ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು. |
109. | ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು. |
110. | ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ. |
111. | ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ. |
112. | ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ. |
113. | ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ. |
114. | ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ. |
115. | ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು. |
116. | ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ. |
117. | ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು. |
118. | ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು. |
119. | ಕಿಟ್ಟದ ಹಾಗೆ ಭೂಮಿ ಯಲ್ಲಿರುವ ದುಷ್ಟರೆಲ್ಲರನ್ನು ತೆಗೆದುಹಾಕುತ್ತೀ, ಆದದ ರಿಂದ ನಿನ್ನ ವಿಧಿಗಳನ್ನು ಪ್ರೀತಿ ಮಾಡುತ್ತೇನೆ. |
120. | ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ. |
121. | ನ್ಯಾಯವನ್ನೂ ನೀತಿಯನ್ನೂ ಮಾಡಿದ್ದೇನೆ;ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಿಬಿಡಬೇಡ. |
122. | ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ. |
123. | ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು. |
124. | ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು. |
125. | ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು. |
126. | ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ. |
127. | ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ. |
128. | ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ. |
129. | ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ. |
130. | ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ. |
131. | ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ. |
132. | ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು. |
133. | ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ. |
134. | ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು. |
135. | ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು. |
136. | ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ. |
137. | ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ. |
138. | ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ. |
139. | ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ. |
140. | ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ. |
141. | ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ. |
142. | ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ. |
143. | ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ. |
144. | ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು. |
145. | ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು. |
146. | ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು. |
147. | ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ. |
148. | ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ. |
149. | ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು. |
150. | ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ. |
151. | ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ. |
152. | ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು. |
153. | ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು. |
154. | ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು. |
155. | ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ನಿನ್ನ ನಿಯ ಮಗಳನ್ನು ಅವರು ಹುಡುಕರು. |
156. | ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು. |
157. | ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು. |
158. | ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ. |
159. | ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು. |
160. | ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ. |
161. | ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ. |
162. | ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ. |
163. | ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ. |
164. | ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ. |
165. | ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ. |
166. | ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ. |
167. | ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ; |
168. | ನಿನ್ನ ಕಟ್ಟಳೆ ಗಳನ್ನೂ ಸಾಕ್ಷಿಗಳನ್ನೂ ಕೈಕೊಳ್ಳುತ್ತೇನೆ; ನನ್ನ ಮಾರ್ಗ ಗಳೆಲ್ಲಾ ನಿನ್ನ ಮುಂದೆ ಇವೆ. |
169. | ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು. |
170. | ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು. |
171. | ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ. |
172. | ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ. |
173. | ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ. |
174. | ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ. |
175. | ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ. |
176. | ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು. |
← Psalms (119/150) → |