← Psalms (120/150) → |
1. | ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು. |
2. | ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು. |
3. | ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು? |
4. | ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ. |
5. | ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ! |
6. | ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು. |
7. | ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ. |
← Psalms (120/150) → |