← Psalms (122/150) → |
1. | ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು. |
2. | ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ. |
3. | ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ. |
4. | ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ. |
5. | ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ. |
6. | ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. |
7. | ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. |
8. | ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ. |
9. | ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ. |
← Psalms (122/150) → |