← Psalms (124/150) → |
1. | ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ, |
2. | ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು, |
3. | ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು. |
4. | ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು. |
5. | ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು. |
6. | ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ. |
7. | ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು. |
8. | ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ. |
← Psalms (124/150) → |