← Psalms (126/150) → |
1. | ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. |
2. | ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. |
3. | ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ. |
4. | ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು. |
5. | ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನು |
6. | ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು. |
← Psalms (126/150) → |