← Psalms (127/150) → |
1. | ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ. |
2. | ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ. |
3. | ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ. |
4. | ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ. |
5. | ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು. |
← Psalms (127/150) → |