← Psalms (128/150) → |
1. | ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. |
2. | ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು. |
3. | ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು. |
4. | ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು. |
5. | ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ. |
6. | ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ. |
← Psalms (128/150) → |