← Psalms (132/150) → |
1. | ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ. |
2. | ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ-- |
3. | ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ |
4. | ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು; |
5. | ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು. |
6. | ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು. |
7. | ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ. |
8. | ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು. |
9. | ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ. |
10. | ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ. |
11. | ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು. |
12. | ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು. |
13. | ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. |
14. | ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ. |
15. | ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು. |
16. | ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು. |
17. | ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ. |
18. | ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ. |
← Psalms (132/150) → |