← Psalms (136/150) → |
1. | ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. |
2. | ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
3. | ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
4. | ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
5. | ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
6. | ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
7. | ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
8. | ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
9. | ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
10. | ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
11. | ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. |
12. | ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. |
13. | ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
14. | ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
15. | ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
16. | ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
17. | ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
18. | ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
19. | ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. |
20. | ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. |
21. | ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. |
22. | ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. |
23. | ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. |
24. | ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
25. | ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
26. | ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. |
← Psalms (136/150) → |