← Psalms (148/150) → |
1. | ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ. |
2. | ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ; |
3. | ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ. |
4. | ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. |
5. | ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. |
6. | ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ. |
7. | ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ, |
8. | ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ, |
9. | ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, |
10. | ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ, |
11. | ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ, |
12. | ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ, |
13. | ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ. |
14. | ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ. |
← Psalms (148/150) → |