← Psalms (17/150) → |
1. | ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ. |
2. | ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ. |
3. | ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ. |
4. | ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. |
5. | ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು. |
6. | ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು. |
7. | ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು. |
8. | ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. |
9. | ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ. |
10. | ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ. |
11. | ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ. |
12. | ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ. |
13. | ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು. |
14. | ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ. |
15. | ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು. |
← Psalms (17/150) → |