← Psalms (18/150) → |
1. | ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ. |
2. | ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ. |
3. | ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ. |
4. | ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು. |
5. | ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು. |
6. | ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು. |
7. | ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು; |
8. | ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು. |
9. | ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. |
10. | ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು. |
11. | ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು. |
12. | ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. |
13. | ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು |
14. | ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು. |
15. | ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು. |
16. | ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು. |
17. | ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು. |
18. | ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು. |
19. | ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು. |
20. | ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು. |
21. | ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. |
22. | ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ. |
23. | ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು. |
24. | ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು. |
25. | ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. |
26. | ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ. |
27. | ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ. |
28. | ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು. |
29. | ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು. |
30. | ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ. |
31. | ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು? |
32. | ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ. |
33. | ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ. |
34. | ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ. |
35. | ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ. |
36. | ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ. |
37. | ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ. |
38. | ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ. |
39. | ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ. |
40. | ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ. |
41. | ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ. |
42. | ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು. |
43. | ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು. |
44. | ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು. |
45. | ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು. |
46. | ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ. |
47. | ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ. |
48. | ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ. |
49. | ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು. |
50. | ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ. |
← Psalms (18/150) → |