← Psalms (21/150) → |
1. | ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು. |
2. | ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ. |
3. | ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ. |
4. | ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ. |
5. | ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ. |
6. | ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ. |
7. | ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು. |
8. | ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. |
9. | ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು. |
10. | ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ. |
11. | ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು. |
12. | ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ. |
13. | ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು. |
← Psalms (21/150) → |